ಮುಧೋಳ : ಬಾಗಲಕೋಟೆ - ಮಂಗಳೂರು ಮಧ್ಯೆ ಹೊಸ ರೈಲು


ಮುಧೋಳ: ವಿಜಯಪುರ-ಮಂಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಆರಂಭಿಸಲಾಗುತ್ತಿದೆ. ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿ ಅಂತಿಮಗೊಂಡಿದ್ದು, ರೈಲು ಸಂಚಾರದ ದಿನಾಂಕ ಅಂತಿಮಗೊಳ್ಳಬೇಕಿದೆ.

ವಿಜಯಪುರ-ಮಂಗಳೂರು ಜಂಕ್ಷನ್ ನಡುವೆ ರೈಲು ಸಂಖ್ಯೆ 06919/06920 ಪ್ರತಿದಿನ ಸಂಚಾರ ನಡೆಸಲಿದೆ. ಈ ರೈಲು ಒಟ್ಟು 21 ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ ಎಂದು ನೈಋತ್ಯ ರೈಲ್ವೆ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮೀಟರ್ ಗೇಜ್‌ ಕಾಲದಲ್ಲಿ ಹುಬ್ಬಳ್ಳಿ-ಮಂಗಳೂರು ನಡುವೆ ರೈಲು ಸಂಚಾರ ನಡೆಸುತ್ತಿತ್ತು. ಈ ರೈಲನ್ನು ಪುನಃ ಸ್ಥಾಪಿಸುವಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಗೆ ಮನವಿ ಸಲ್ಲಿಸಲಾಗಿತ್ತು. ಈಗ ವೇಳಾಪಟ್ಟಿ ಅಂತಿಮಗೊಂಡಿದೆ.

ಪ್ರತಿದಿನ ವಿಜಯಪುರದಿಂದ ಮಧ್ಯಾಹ್ನ 2 ಗಂಟೆಗೆ ಹೊರಡಲಿರುವ ರೈಲು ಮರುದಿನ ಮುಂಜಾನೆ 9.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ರೈಲು ಸಂಚಾರದ ದಿನಾಂಕ ಶೀಘ್ರದಲ್ಲಿಯೇ ಅಂತಿಮಗೊಳ್ಳಲಿದೆ.

ನಿಲ್ದಾಣಗಳು : ವಿಜಯಪುರದಿಂದ ಹೊರಡುವ ರೈಲು ಬಸವನಬಾಗೇವಾಡಿ ರಸ್ತೆ, ಆಲಮಟ್ಟಿ, ಬಾಗಲಕೋಟೆ, ಗುಳೇದಗುಡ್ಡ, ಬಾದಾಮಿ, ಹೊಳೆ ಆಲೂರು, ಗದಗ, ಹುಬ್ಬಳ್ಳಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಕಡೂರು, ಅರಸೀಕೆರೆ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಬಂಟ್ವಾಳ ಮೂಲಕ ಮಂಗಳೂರು ಜಂಕ್ಷನ್ ತಲುಪಲಿದೆ.

ನವೀನ ಹಳೆಯದು