ಮುಧೋಳ ತಾಲೂಕಿನ ನೂತನ ಏತ ನೀರಾವರಿ ಕ್ಯಾಬಿನೆಟ್ ಅನುಮೋದನೆ.

ಮುಧೋಳ: ಬಾಗಲಕೋಟೆ ಜಿಲ್ಲೆಯ ಮುಧೋಳ ಮತ್ತು ಬೀಳಗಿ ತಾಲ್ಲೂಕಿನ ವ್ಯಾಪ್ತಿಯಡಿ ಬರುವ ಗಲಗಲಿ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ನೀರನ್ನೆತ್ತಿ 3535 ಹೆಕ್ಟೇರ್ ಭೂಮಿಗೆ ಮುಂಗಾರು ಹಂಗಾಮಿನ ಅಚ್ಚುಕಟ್ಟು ಪ್ರದೇಶಗಳಿಗೆ ಸಮರ್ಪಕವಾಗಿ ನೀರನ್ನು ಹರಿಸಲು ಹಾಗೂ 5 ಕೆರೆಗಳನ್ನು ತುಂಬಿಸುವ ಮೆಳ್ಳಿಗೇರಿ-ಹಲಗಲಿ ಏತ ನೀರಾವರಿ ಯೋಜನೆಯನ್ನು ರೂ. 197 ಕೋಟಿಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಸಚಿವಸಂಪುಟದಲ್ಲಿ ಆಡಳಿತಾತ್ಮಕ ಅನುಮೋದನೆ ದೊರತಿದೆ.

ಈ ಯೋಜನೆಯನ್ನು 2 ಹಂತಗಳಲ್ಲಿ ಅಂದರೆ ಮೊದಲನೇ ಹಂತದಲ್ಲಿ 120.00 ಕೋಟಿ ರೂ.ಗಳಲ್ಲಿ ಮತ್ತು ಎರಡನೇ ಹಂತದಲ್ಲಿ 77.00 ಕೋಟಿ ರೂ. ಗಳಲ್ಲಿ ಕೈಗೊಳ್ಳಲು ಮತ್ತು ಮೊದಲನೇ ಹಂತದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರತಿದ್ದು, ಮುಧೋಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಮೆಳ್ಳಿಗೇರಿ ಮತ್ತು ಹಲಗಲಿಯಲ್ಲಿಯ 5 ಕೆರೆಗಳಾದ ಕರಿಯಪ್ಪನಕೆರೆ, ಮೆಳ್ಳಿಗೇರಿ ಕೆರೆ, ಹುಣಸಿಕಟ್ಟಿ ಕೆರೆ, ಸಿದ್ದಾಪುರ ಕೆರೆ ಮತ್ತು ಜಮಖಂಡಿ ಕಟ್ಟೆ ಕೆರೆಗಳಿಗೆ ಈ ಯೋಜನೆಯಿಂದ ನೀರು ತುಂಬಿಸಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೀನ ಹಳೆಯದು