31 ರಂದು ಉದ್ಯೋಗಕ್ಕೆ ನೇರ ಸಂದರ್ಶನ

ಬಾಗಲಕೋಟೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜನವರಿ 31 ರಂದು ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಉದ್ಯೋಗ ಮೇಳದಲ್ಲಿ ಹಲವಾರು ಖಾಸಗಿ ಕಂಪನಿಗಳು ಭಾಗವಹಿಸಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಸಂದರ್ಶನದಲ್ಲಿ 18 ರಿಂದ 35 ವಯೋಮಿತಿಯಲ್ಲಿರುವ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವೀಧರರು ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಮೂಲ ಅಂಕಪಟ್ಟಿ ಝರಾಕ್ಷ ಪ್ರತಿಯೊಂದಿಗೆ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ7676692029, 7019606100, 08354-235337.  ಸಂಪರ್ಕಿಸಬಹುದಾಗಿದೆ

ನವೀನ ಹಳೆಯದು