ಗುಳೇದಗುಡ್ಡದ ಲಕ್ಷ್ಮೀ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

 

ಬಾಗಲಕೋಟೆ, ಜನವರಿ 19; ಬಾಗಲಕೋಟೆಯ ಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಜನವರಿ 30 ಕೊನೆಯ ದಿನವಾಗಿದೆ.

ಕಿರಿಯ ಸಹಾಯಕ 16, ಅಕೌಂಟೆಂಟ್ (ಕಂಪ್ಯೂಟರ್ ಪ್ರೊಗ್ರಾಮರ್) 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಬ್ಯಾಂಕ್ ನಿಗದಿಪಡಿಸಿದ ಮಾದರಿಯಲ್ಲಿಯೇ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಬೇಕಿದೆ.

ಕಿರಿಯ ಸಹಾಯಕ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕಂಪ್ಯೂಟರ್‌ನಲ್ಲಿ ಹೆಚ್ಚಿನ ಜ್ಞಾನ ಹೊಂದಿದವರಿಗೆ, ಬ್ಯಾಂಕಿಂಗ್ ವಲಯದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ವೇತನ ಶ್ರೇಣಿ 16,000-29,600 ರೂ. ಆಗಿದೆ.

ಅಕೌಂಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ವಿಷಯದಲ್ಲಿ ಪದವಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ, ಬ್ಯಾಂಕಿಂಗ್ ವ್ಯವಹಾರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ; ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೊನೆಯ ದಿನಾಂಕಕ್ಕೆ 18 ವರ್ಷ ಪೂರ್ಣಗೊಂಡಿರಬೇಕು. ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ/ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 43 ವರ್ಷಗಳು. ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ/ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 500 ರೂ. ಮತ್ತು ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 1000 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಅರ್ಜಿ ಶುಲ್ಕವನ್ನು ಲಕ್ಷ್ಮೀ ಸಹಕಾರಿ ಬ್ಯಾಂಕ್ ನಿಯಮಿತ, ಗುಳೇದಗುಡ್ಡ ಇವರ ಹೆಸರಿಗೆ ಡಿಡಿ ಪಡೆದು ಅರ್ಜಿ ಜೊತೆ ಲಗತ್ತಿಸಬೇಕು.

ಬ್ಯಾಂಕ್ ಶಾಖೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಬೆಳಗ್ಗೆ 10.30 ರಿಂದ ಸಂಜೆ 5 ಗಂಟೆಯ ತನಕ ಪಡೆದು ಭರ್ತಿ ಮಾಡಿ ಸಲ್ಲಿಕೆ ಮಾಡಬಹುದು. ಅರ್ಜಿಯ ಜೊತೆ ಇತ್ತೀಚಿನ ಪಾಸ್‌ಪೋರ್ಟ್‌ ಅಳತೆಯ ಮೂರು ಭಾವಚಿತ್ರ. ವಿದ್ಯಾರ್ಹತೆಯ ಎಲ್ಲಾ ವರ್ಷಗಳ ಸೆಮಿಸ್ಟರ್ ಅಂಕಪಟ್ಟಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಗಬೇಕಿದೆ. ಪೂರ್ಣ ವಿವರ ಇರದ, ಅಸ್ಪಷ್ಟ ಮಾಹಿತಿ ಇರುವ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಯಾವುದೇ ಕಾರಣ ನೀಡದೆ ನೇಮಕಾತಿಯನ್ನು ಮೂಂದೂಡುವ ರದ್ದುಪಡಿಸುವ ಅಧಿಕಾರವನ್ನು ಬ್ಯಾಂಕ್ ಹೊಂದಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್‌ ಶಾಖೆಯನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕೇಂದ್ರ ಕಚೇರಿ

9448111266 / 08357-250310


ನವೀನ ಹಳೆಯದು