19ರಂದು ಮಹಾಯೋಗಿ ವೇಮನ ಜಯಂತಿ


ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜನವರಿ 19 ಬೆಳೆಗ್ಗೆ 11 ಗಂಟೆಗೆ ನವನಗರದ ಡಾ.ಬಿ.ಆರ್ ಅಂಬೇಡ್ಕರ ಭವನದಲ್ಲಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶಾಸಕ ವೀರಣ್ಣ ಚರಂತಿಮಠ ವಹಿಸಲಿದ್ದು, ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ರಾಜಕ್ಯ ಕೈಮ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಸಂಸದ ಪಿ.ಸಿ.ಗದ್ದಿಗೌಡರ, ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ. ಕಸಾಪದ ತಾಲೂಕು ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ ಉಪನ್ಯಾಸಕರಾಗಿ ಆಗಮಿಸಲಿದ್ದಾರೆ.

ನವೀನ ಹಳೆಯದು