ಮುಧೋಳ: ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿ ನೀಡುವ ಸಲುವಾಗಿ ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಸಹಕಾರಿ ಸಂಘವು ಕನಿಷ್ಟ ಮೂರು ವರ್ಷಗಳಿಂದ ಚಾಲನೆಯಲ್ಲಿದ್ದು ಹಿಂದಿನ ಎರಡು ವರ್ಷಗಳಲ್ಲಿ ಕನಿಷ್ಟ 2 ಲಕ್ಷ ರೂ.ಗಳ ನಿರಂತರ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು. ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವದಿಲ್ಲ. ವಿಕಲಚೇತನ ಮತ್ತು ತೃತೀಯ ಲಿಂಗದ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆಗಳನ್ನು ಆಯಾ ತಾಲೂಕಿನ ತಹಶೀಲ್ದಾರ ಕಚೇರಿಯಿಂದ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ 20 ರಂದು ಸಂಜೆ 5.30 ರೊಳಗೆ ಸಲ್ಲಿಸುವಂತೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.