ಮುಧೋಳ: ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಮಳೆಯ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸಮುದ್ರಗಳ ಮೇಲ್ಮೈನಲ್ಲಿ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾಜ್ಯದ ನಾನಾ ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಗುರುವಾರದಿಂದ ಉತ್ತರ ಕನ್ನಡದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಶುಕ್ರವಾರದಿಂದ ಬಯಲುಸೀಮೆಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಮಾ.14 ರಿಂದ 18 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಹಗುರ ಮಳೆ ಹಾಗೂ ಮಾ.16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18 ರವೆರೆಗೆ ಮಳೆಯಾಗಲಿದೆ.