ಮುಧೋಳ ತಾಲೂಕಿನ 38 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ಮತ್ತು ಮುಧೋಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಮಾರ್ಚ್-2023ರ ಅಂತ್ಯಕ್ಕೆ ವಯೋ ನಿವೃತ್ತಿಯಿಂದ ಖಾಲಿಯಾಗುವ ಹುದ್ದೆಗಳು ಸೇರಿ ಖಾಲಿ ಇರುವ ಹಾಗೂ ಹೊಸದಾಗಿ ಮಂಜೂರಾಗಿರುವ ಕೇಂದ್ರ ಗಳ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆಪ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬಾದಾಮಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 32 ಅಂಗನವಾಡಿ ಕಾರ್ಯಕರ್ತೆ ಹಾಗೂ 84 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನವಾದರೆ, ಮುಧೋಳ ತಾಲೂಕಿನ 38 ಅ೦ಗನವಾಡಿ ಕಾರ್ಯಕರ್ತೆ, 66 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನ ಏಪ್ರಿಲ್ 24 ಆಗಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾಗಳ ಕಚೇರಿ ಬಾದಾಮಿ (08357-295009), ಮುಧೋಳ (08350-280162) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ನವೀನ ಹಳೆಯದು