ವಿದೇಶಿ ವ್ಯಾಸಾಂಗ: ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಮುಧೋಳ: ಸಮಾಜ ಕಲ್ಯಾಣ ಇಲಾಖೆಯ ವತಿಯಿ೦ದ ಪ್ರಬುದ್ಧ ಸಾಗರೋತ್ತರ ಎಂಬ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ವ್ಯಾಸಂಗಕ್ಕೆ ಪ್ರೋತ್ಸಾಹ ಧನ ನೀಡಲಾಗುವುದು.


ಪ್ರಸಕ್ತ 2023 -24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪ್ರಬುದ್ಧ ಸಾಗರೋತ್ತರ ಯೋಜನೆಯಡಿ ಪರಿಶಿಷ್ಟ ಜಾತಿ, ಅಲೆಮಾರಿ ಹಾಗೂ ಅರೆ ಅಲೆಮಾರಿ, ಬುಡಕಟ್ಟುಗಳು ಮತ್ತು ಭೂರಹಿತ ಕೃಷಿ ಕಾರ್ಮಿಕರು ಹಾಗೂ ಸಾಂಪ್ರದಾಯಿಕ ಕುಶಲ ಕರ್ಮಿಗಳ ವರ್ಗದ ಅಭ್ಯರ್ಥಿಗಳಿಗೆ ವಿದೇಶಿ ವಿಶ್ವ ವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಪಿ.ಹೆಚ್‌ಡಿ ಅಧ್ಯಯನ ಮಾಡಲು ರಾಷ್ಟ್ರೀಯ ಸಾಗರೋತ್ತರ ಪ್ರೋತ್ಸಾಹ ಧನ ಪಡೆಯಲು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. 

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮುಧೋಳ ಅವರ ಕಚೇರಿಗೆ ಅಥವಾ ದೂರವಾಣಿ ಸಂಖ್ಯೆ 9480843062 ಗೆ ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-2 ಸಹಾಯಕ ನಿರ್ದೇಶಕ ಮೋಹನ ಕೋರಡ್ಡಿ ವಿನಂತಿಸಿದ್ದಾರೆ.

ನವೀನ ಹಳೆಯದು