ಮುಧೋಳ: ಮಾ.25 ರಿಂದ ಏ.6ರ ವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಇಒ ಎಸ್.ಎಂ.ಮುಲ್ಲಾ ತಿಳಿಸಿದ್ದಾರೆ.
ಒಟ್ಟು 5757 ವಿದ್ಯಾರ್ಥಿಗಳಿದ್ದು, ಇದಕ್ಕಾಗಿ 17 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 258 ಬ್ಲಾಕ್‌ಗಳನ್ನು ಮಾಡಲಾಗಿದೆ. ಒಂದು ಕೋಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಅವರಿಗೆ ಆರೋಗ್ಯ ಸೇರಿದಂತೆ ಎಲ್ಲ ಮೂಲಭುತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಕಲು ಮುಕ್ತ ಪರೀಕ್ಷೆ ನಡೆಸಲು ಅಧೀಕ್ಷಕರು, ಕಸ್ಟೋಡಿಯನ್, ಹಾಗೂ 364 ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಸಿಸಿಟಿವಿ ವೆಬ್ ಕಾಸ್ಟಿಂಗ್ ಕೂಡ ಅಳವಡಿಸಲಾಗಿದೆ. ಪರೀಕ್ಷಾರ್ಥಿಗಳಿಗೆ ಹೋಳಿ ಬಣ್ಣ ಎರಚದೆ ಅವರಿಗೆ ಎಲ್ಲ ರೀತಿಯ ಸಹಕಾರ ನೀಡಬೇಕೆಂದು ಮುಲ್ಲಾ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ